ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಆರ್ ಲಕ್ಷ್ಮಣ ಬಿಜೆಪಿ ಅಭ್ಯರ್ಥಿ ಯಧುವೀರ ಮಹಾರಾಜರ ಎದುರು ಹೀನಾಯ ಸೋಲು ಅನುಭವಿಸಿದ ಬಳಿಕ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ಮಧ್ಯಮ ವರ್ಗದ ಜನ ಗ್ಯಾರೆಂಟಿ ಯೋಜನೆಗಳನ್ನು ವಿರೋಧಿಸಿದ್ದು, ತಮ್ಮ ಚುನಾವಣೆ ಫಲಿತಾಂಶದಿಂದ ಗೊತ್ತಾಗಿದೆ ಎಂದಿರುವ ಅವರು. ಎಲ್ಲರಿಗೂ ಗ್ಯಾರೆಂಟಿ ಯೋಜನೆಯನ್ನು ಉಚಿತವಾಗಿ ಕೊಡುವದನ್ನು ನಿಲ್ಲಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಮೈಸೂರಿನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಲಕ್ಷ್ಮಣ, ಗ್ಯಾರೆಂಟಿ ಯೋಜನೆಗಳನ್ನು ಎಲ್ಲರಿಗೂ ಕೂಡುವ ಬದಲು ಅರ್ಹರಿರುವ ಬಡವರಿಗೆ ಮಾತ್ರ ನೀಡಬೇಕೆಂದು ಆಗ್ರಹಿಸಿದ್ದಾರೆ.
ಸರ್ಕಾರ, ಕೂಡಲೇ ಗ್ಯಾರೆಂಟಿ ಯೋಜನೆಗಳನ್ನು ಪುನರ ಪರಿಶೀಲನೆ ನಡೆಸಿ, ಯಾರಿಗೆ ಅಗತ್ಯವಾಗಿದೆಯೋ ಅಂತಹವರಿಗೆ ಮಾತ್ರ ಉಚಿತ ವಿದ್ಯುತ್ ಹಾಗೂ 2000 ಹಣ ನೀಡುವಂತೆ ಆಗ್ರಹಿಸಿದ್ದಾರೆ. ಮೈಸೂರು ಲೋಕಸಭಾ ಚುನಾವಣೆಯಲ್ಲಿ ಸೋಲುತ್ತಿದ್ದಂತೆ ಲಕ್ಷ್ಮಣ ಈ ಹೇಳಿಕೆ ನೀಡಿದ್ದಾರೆ.