ಕರ್ನಾಟಕದ ಹೃದಯವಂತ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನರೇಂದ್ರ ಮೋದಿ ನೇತೃತ್ವದಲ್ಲಿ ಎನ್ ಡಿ ಎ ನೇತ್ರತ್ವದ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬರುತ್ತಿದೆ. ಇಂದು ಸಂಜೆ ನಡೆಯಲಿರುವ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಕರ್ನಾಟಕದಿಂದ ಕುಮಾರಣ್ಣ ಒಬ್ಬರೇ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ.
ರಾಜ್ಯದಲ್ಲಿ ಜೆಡಿಎಸ್ ಮುಗಿದೇ ಹೋಯ್ತು ಅನ್ನುವಷ್ಟರಲ್ಲಿ ಮತ್ತೆ ಮೈಕೊಡವಿಕೊಂಡು ನಿಂತಿರುವ ಕುಮಾರಸ್ವಾಮಿ ಕೇಂದ್ರ ಸಚಿವರಾಗುತ್ತಿದ್ದು, ರಾಜ್ಯ ರಾಜಕಾರಣ ಮತ್ತೆ ಚಿಗುರೊಡೆದಿದೆ.