Download Our App

Follow us

Home » ಆರೋಗ್ಯ » ಡೆಂಗ್ಯೂ ಸಂಕೀರ್ಣ ಸ್ಥಿತಿ ತಲುಪಿದರೆ ಅದಕ್ಕೆ ಚಿಕಿತ್ಸೆಯೇ ಇಲ್ಲ / ಡಾ. C N ಮಂಜುನಾಥ

ಡೆಂಗ್ಯೂ ಸಂಕೀರ್ಣ ಸ್ಥಿತಿ ತಲುಪಿದರೆ ಅದಕ್ಕೆ ಚಿಕಿತ್ಸೆಯೇ ಇಲ್ಲ / ಡಾ. C N ಮಂಜುನಾಥ

ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಸೊಳ್ಳೆಗಳ ನಿಯಂತ್ರಣ ಬಹು ಮುಖ್ಯವಾಗಿದೆ. ಡೆಂಗ್ಯೂ ಜ್ವರ ನಿಯಂತ್ರಣ ಆಗದೆ ಇದ್ದಲ್ಲಿ ಮಾರಕ ಕಾಯಿಲೆಗಳಾದ ಚಿಕೂನ್ ಗುನ್ಯಾ, ಝೀಕಾ ವೈರಸ್ ಕಾಯಿಲೆ ಬರುವ ಸಾಧ್ಯತೆಗಳಿವೆ ಎಂದು ಖ್ಯಾತ ವೈದ್ಯ ಹಾಗೂ ಲೋಕಸಭಾ ಸದಸ್ಯ ಡಾ. ಸಿ ಎನ್ ಮಂಜುನಾಥ ತಿಳಿಸಿದ್ದಾರೆ. 

ಸೊಳ್ಳೆ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಪಂಚಾಯಿತಿಗಳು, ಜಿಲ್ಲಾ ಪಂಚಾಯಿತಿ, ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಿದೆ. ಡೆಂಗ್ಯೂ ನಿಯಂತ್ರಣಕ್ಕೆ ಒಂದು ಟಾಸ್ಕ್ ಫೋರ್ಸ್ ರಚಿಸಬೇಕೆಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. 

ಮಳೆಗಾಲದ ಸಮಸ್ಯೆಗಳಿಗೆ ಬೇಸಿಗೆ ಕಾಲದಲ್ಲೇ ಪರಿಹಾರ ಕಂಡುಕೊಳ್ಳಬೇಕು ಎಂದ ಅವರು, ಸೊಳ್ಳೆ ಉತ್ಪತ್ತಿ ಆಗದಂತೆ ನೋಡಿಕೊಳ್ಳಬೇಕು. ಒಬ್ಬ ವೈದ್ಯರು ಸೇರಿ 7 ಜನ ಸಾವನ್ನಪ್ಪಿದ್ದು, ಸಾವಿರಾರು ಜನ ಸೋಂಕಿತರಿದ್ದಾರೆ. ಮಕ್ಕಳಲ್ಲೂ ಡೆಂಗ್ಯೂ ಜ್ವರ ಹೆಚ್ಚಾಗುತ್ತಿದೆ. ಆದ್ದರಿಂದ ಎಲ್ಲ ಶಾಲೆ- ಕಾಲೇಜುಗಳಿಗೆ ಸುತ್ತೋಲೆ ಕಳಿಸಿ, ಶಾಲಾ ಆಡಳಿತದ ಜೊತೆ ಸಭೆ ನಡೆಸಬೇಕು ಹೇಳಿದ್ದಾರೆ. 

ಡೆಂಗ್ಯೂ ಸಂಕೀರ್ಣ ಸ್ಥಿತಿ ತಲುಪಿದರೆ ಅದಕ್ಕೆ ಚಿಕಿತ್ಸೆಯೇ ಇಲ್ಲ ಎಂದಿರುವ ಡಾ. ಮಂಜುನಾಥ ಕೂಡಲೇ ರಾಜ್ಯ ಸರ್ಕಾರ ಮುನ್ನೇಚ್ಚರಿಕೆ ವಹಿಸಬೇಕೆಂದು ಆಗ್ರಹಿಸಿದ್ರು. 

 

 

Karnataka Files
Author: Karnataka Files

Leave a Comment

RELATED LATEST NEWS

error: Content is protected !!