ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಬೆಂಗಳೂರಿನಲ್ಲಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಹಾಗೂ ಜಿ ಪಂ ಸಿ ಇ ಓ ಗಳ ಸಭೆ ನಡೆಸಿದರು.
ವಿಧಾನಸಭೆಯ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಹಿರಿಯ ಅಧಿಕಾರಿಗಳಿಗೆ ಆಡಳಿತಕ್ಕೆ ಸಂಬಂಧಪಟ್ಟಂತೆ, ಸಲಹೆ, ಸೂಚನೆ ನೀಡಿದರು.
ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ನೀಡಬೇಕು, ಕುರಿ-ಮೇಕೆಗಳ ಟೆಂಟ್ ಹಾಕಿರುವ ಸ್ಥಳಕ್ಕೇ ಹೋಗಿ ಲಸಿಕೆ ಮತ್ತು ಚುಚ್ಚುಮದ್ದುಗಳನ್ನು ನೀಡಬೇಕು, ಸಂಚಾರಿ ಕುರಿಗಾಹಿಗಳಿಗೆ ಬಂದೂಕು ಲೈಸೆನ್ಸ್ ಕೊಡುವುದು ಕಡ್ಡಾಯ ಎಂದ ಅವರು, ಇದರಿಂದ ಕುರಿ ಕಳ್ಳತನ ತಡೆಯಲು ಸಾಧ್ಯ ಎಂದರು.
