ಉಳ್ಳಾಲ್ ಭಾಗದ ಖಾಜಿ, ಮುಸ್ಲಿಂ ಸಮುದಾಯದ ಆಧ್ಯಾತ್ಮಿಕ ನಾಯಕರು, ಹಿರಿಯರು ಆದ ಸೈಯ್ಯದ್ ಕೂರತ್ ತಂಙಳ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ನಿಧನದ ಸುದ್ದಿ ನೋವುಂಟುಮಾಡಿದೆ ಎಂದು ಹೇಳಿದ್ದಾರೆ.
ಸದಾಕಾಲ ಸಮಾಜದ ಹಿತವನ್ನು ಬಯಸುತ್ತಿದ್ದ ಅವರು, ಕೋಮುಸಾಮರಸ್ಯಕ್ಕಾಗಿ ದುಡಿದ ಹಿರಿಯ ಚೇತನ. ಅವರ ಅಗಲಿಕೆ ಮುಸ್ಲಿಂ ಸಮುದಾಯಕ್ಕೆ ಮಾತ್ರವಲ್ಲ, ಇಡೀ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ ಕೋರಿರುವ ಅವರು, ಸೈಯ್ಯದ್ ಕೂರತ್ ತಂಙಳ್ ಅವರ ಕುಟುಂಬವರ್ಗ ಮತ್ತು ಅನುಯಾಯಿಗಳಿಗೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.
