ಬೆಂಗಳೂರಿನ ನಂತರ ಅತೀ ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ ಧಾರವಾಡ ಅವಳಿ ನಗರಕ್ಕೆ 20 ವರ್ಷಗಳ ನಂತರ ದಕ್ಷ ಪೊಲೀಸ್ ಕಮಿಷನರರೊಬ್ಬರ ಆಗಮನವಾಗಿದೆ.
ಪೊಲೀಸ್ ಕಮಿಷನರ್ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ನೂತನ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ, ಖಾಕಿ ಖದರ್ ತೋರಿಸುತ್ತಿದ್ದಾರೆ.
ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರಿಂದ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೇ ರಾತ್ರಿ ಪೊಲೀಸ್ ಏರಿಯಾ ಡಾಮಿನೇಷನ್ ಕ್ರಮ ಕೈಗೊಳ್ಳಲಾಗಿದೆ.
ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ರೌಡಿಶೀಟರ್ ಗಳು, MOB ಗಳು, ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಖಾಲಿ ಇರುವ ಲೇಔಟ್ ಗಳಲ್ಲಿ, ರಸ್ತೆಗಳಲ್ಲಿ ಕುಳಿತು ಮಧ್ಯವನ್ನು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಮಾಡುತ್ತಿದ್ದ ಒಟ್ಟು 130 ಜನರನ್ನು ವಶಕ್ಕೆ ಪಡೆದು ಕೆಪಿ Act ಅಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ಸೂಕ್ತ ಎಚ್ಚರಿಕೆಯನ್ನೂ ನೀಡಿ ಕಳಿಸಲಾಗಿದೆ.
ಕ್ರೈಮ್ ಸಿಟಿಯಾಗಿ ಪರಿವರ್ತನೆಗೊಂಡಿದ್ದ ಹುಬ್ಬಳ್ಳಿ ಧಾರವಾಡ ಅವಳಿ ನಗರವನ್ನು ಸೇಫ್ ಸಿಟಿಯಾಗಿ ಮಾಡಲು ಎಲ್ಲ ರೀತಿಯ ಪ್ರಯತ್ನ ನಡೆಸಲಾಗುತ್ತಿದೆ.