ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಬೆಂಗಳೂರಿನಲ್ಲಿ ಪಕ್ಷದ ಕಾರ್ಯಕರ್ತರ ಅಹವಾಲು ಸ್ವೀಕಾರ ಮಾಡಿದರು.
ಈ ವೇಳೆ ಇಸ್ಮಾಯಿಲ್ ಎನ್ನುವವರು, ಹುಬ್ಬಳ್ಳಿ ಧಾರವಾಡದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ತೊಂದರೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳಿಗೆ ಹೇಳಿದಾಗ ತಕ್ಷಣ ಸ್ಪಂದಿಸಿದ ಸಿದ್ದರಾಮಯ್ಯನವರು, ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಯಾವದೇ ಕಾರಣಕ್ಕೂ ಬೀದಿ ಬದಿ ವ್ಯಾಪಾರಿಗಳಿಗೆ ತೊಂದರೆ ನೀಡದಂತೆ ಖಡಕ್ ಸೂಚನೆ ನೀಡಿದರು. ಬೀದಿ ಬದಿ ವ್ಯಾಪಾರಿಗಳ ಜೊತೆ ಮಾನವೀಯವಾಗಿ ವರ್ತಿಸುವಂತೆ ತಾಕೀತು ಮಾಡಿದರು.