545 PSI ಹುದ್ದೆಯ ಅಂತಿಮ ಅಂಕಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗೃಹ ಇಲಾಖೆಗೆ ಸಲ್ಲಿಸಿ 4 ತಿಂಗಳು ಕಳೆದರೂ, ರಾಜ್ಯ ಪೊಲೀಸ್ ಇಲಾಖೆ ತಾತ್ಕಾಲಿಕ ಅಂಕಪಟ್ಟಿಯನ್ನು ಬಿಡುಗಡೆಗೊಳಿಸಿಲ್ಲ. ಇದು PSI ಅಭ್ಯರ್ಥಿಗಳಿಗೆ ತೀವ್ರ ತೊಂದರೆ ಉಂಟುಮಾಡಿದ್ದು, ತಕ್ಷಣ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡುವಂತೆ ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಆಗ್ರಹಿಸಿದ್ದಾರೆ.
545 ಪಿ ಎಸ್ ಐ ಹುದ್ದೆಗಳಿಗೆ ನೇಮಕಾತಿ ಆರಂಭಗೊಂಡು 4 ವರ್ಷ ಕಳೆದಿದೆ. ಇದರಿಂದ ವಿದ್ಯಾರ್ಥಿಗಳ ಜೀವನ ಅತಂತ್ರಗೊಂಡಿದೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಯಾರು ಹೊಣೆ ಎಂದು ಬೆಲ್ಲದ ಪ್ರಶ್ನಿಸಿದ್ದಾರೆ.
ಮಾನ್ಯ ಗೃಹ ಸಚಿವರಾದ ಜಿ ಪರಮೇಶ್ವರ ಅವರು, ಶೀಘ್ರವೇ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡುವಂತೆ KSP ಇಲಾಖೆಗೆ ಸೂಚಿಸಬೇಕೆಂದು ಅರವಿಂದ ಬೆಲ್ಲದ ಆಗ್ರಹಿಸಿದ್ದಾರೆ.