ಉತ್ತರಾಖಂಡದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಬದರಿನಾಥ್ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಖಪತ್ ಸಿಂಗ್ ಬುಟೋಲಾ 5224 ಮತಗಳ ಅಂತರದಿಂದ ಜಯಗಳಿಸಿದ್ದಾರೆ.
ಮಾರ್ಚ್‌ನಲ್ಲಿ ಕಾಂಗ್ರೆಸ್ ಶಾಸಕ ರಾಜೇಂದ್ರ ಭಂಡಾರಿ ರಾಜೀನಾಮೆ ನೀಡಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದ ನಂತರ ಬದರಿನಾಥ್ ಸ್ಥಾನ ಖಾಲಿಯಾಗಿತ್ತು. ನಂತರ ಇಲ್ಲಿ ಉಪಚುನಾವಣೆ ನಡೆದಿತ್ತು.
ಬಿಜೆಪಿಯಿಂದ ಕಣಕ್ಕಿಳಿದಿದ್ದ ರಾಜೇಂದ್ರ ಭಂಡಾರಿ ಈ ಚುನಾವಣೆಯಲ್ಲಿ ಸೋಲು ಅನುಭವಿಸಬೇಕಾಯಿತು. ಮಂಗ್ಲುರು ಕ್ಷೇತ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಮಂಗ್ಲುರುನಲ್ಲಿ ಕಾಂಗ್ರೆಸ್‌ನ ಖಾಜಿ ನಿಜಾಮುದ್ದೀನ್ ಗೆಲುವು ಸಾಧಿಸಿದ್ದಾರೆ.
ಖಾಜಿ ನಿಜಾಮುದ್ದೀನ್ 422 ಮತಗಳಿಂದ ಗೆಲುವು ಸಾಧಿಸಿದ್ದಾರೆ.