ಅಮೇರಿಕಾದ ಪೆನ್ಸಿಲ್ವೇನಿಯಾದ ಬಟ್ಲರ್ನಲ್ಲಿ ನಿನ್ನೇ ಸಂಜೆ ನಡೆದ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆದಿದೆ. ರ್ಯಾಲಿ ವೇಳೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಟ್ರಂಪ ಅವರ ಕಿವಿ ಮತ್ತು ಮುಖದ ಮೇಲೆ ರಕ್ತ ಬಂದಿದೆ. ಘಟನೆ ನಡೆಯುತ್ತಿದ್ದಂತೆ ಭದ್ರತಾ ಸಿಬ್ಬಂದಿ ಅವರನ್ನು ಸುತ್ತುವರೆದು ರಕ್ಷಿಸಿದ್ದಾರೆ.
ಘಟನೆಯ ಬಗ್ಗೆ ತನಿಖೆ ಕೈಗೊಂಡಿರುವ ಅಮೇರಿಕಾದ ಸೀಕ್ರೆಟ್ ಸರ್ವಿಸ್, ಟ್ರಂಪ ಸುರಕ್ಷಿತವಾಗಿದ್ದಾರೆ ಎಂದು ಹೇಳಿದೆ. ಅಲ್ಲದೆ ಗುಂಡಿನ ದಾಳಿಯ ಬಗ್ಗೆ ತನಿಖೆ ನಡೆದಿದ್ದು, ಗುಂಡಿನ ದಾಳಿಯ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಅದು ಹೇಳಿದೆ.