ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಇಂದು ನವದೆಹಲಿಯ ಪ್ರೆಸ್ ಕ್ಲಬ್ ನಲ್ಲಿ ಮಹತ್ವದ ಪತ್ರಿಕಾಗೋಷ್ಟಿ ನಡೆಸಲಿದೆ.
ವಿಚ್ಛೇದಿತ ಮುಸ್ಲಿಂ ಮಹಿಳೆಯರ ಜೀವನಾಂಶದ ಬಗ್ಗೆ ಇತ್ತೀಚಿಗೆ ಸುಪ್ರೀಂಕೋರ್ಟ್ ನೀಡಿದ ತೀರ್ಪು ಹಾಗೂ ಉತ್ತರಾಖಂಡದ ವಿಧಾನಸಭೆಯಲ್ಲಿ ಮಂಡಿಸಲಾದ ಏಕರೂಪ ನಾಗರಿಕ ಸಂಹಿತೆ ಮಸೂದೆ ಬಗ್ಗೆ ಮಾತನಾಡುವ ಸಾಧ್ಯತೆ ಇದೆ.
ಈಗಾಗಲೇ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಏಕರೂಪ ನಾಗರಿಕ ಸಂಹಿತೆ ಕಾಯ್ದೆಯನ್ನು ವಿರೋಧಿಸಿದೆ. ಈ ಪ್ರಸ್ತಾವಿತ ಕಾನೂನು ಸಂವಿಧಾನದ 25, 26 ಮತ್ತು 29 ರ ಮೂಲಭೂತ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ಮಂಡಳಿ ಹೇಳಿದೆ.