ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅಂಗನವಾಡಿಗಳಿಗೆ ಶುಭ ಸುದ್ದಿ ಕೊಟ್ಟಿದ್ದಾರೆ.
ಎಲ್‌ಕೆಜಿ, ಯುಕೆಜಿ ಆರಂಭಿಸುವ ಪ್ರತಿ ಅಂಗನವಾಡಿಗೆ 5 ಲಕ್ಷ ರೂ. ಅನುದಾನ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಪ್ರಸ್ತುತ ಸೇವೆಯಲ್ಲಿರುವ ಅಂಗನವಾಡಿ ಶಿಕ್ಷಕರಿಗೆ ಕೌಶಲಾಭಿವೃದ್ಧಿ ತರಬೇತಿ ನೀಡಲಾಗುವುದು ಅಲ್ಲದೆ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣ ಮಾಡುವುದರ ಜೊತೆಗೆ ಮಕ್ಕಳಿಗೂ ಉತ್ತಮ ಶಿಕ್ಷಣ ನೀಡುವುದು ನಮ್ಮ ಉದ್ದೇಶ ಎಂದು ಹೇಳಿದ್ದಾರೆ.
ರಾಜ್ಯದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಜುಲೈ 22 ರಿಂದ ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು (ಎಲ್‌ಕೆಜಿ, ಯುಕೆಜಿ) ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.