Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಮಳಿ ಬಾಳ ಐತಿ, ಅದಕ್ಕ ನಾಳೆ, ನಾಳಿದ್ದು, ಧಾರವಾಡ ಜಿಲ್ಲಾದಾಗ ಸಾಲಿ, ಕಾಲೇಜಿಗೆ ಸೂಟಿ ಕೊಟ್ಟಾರಿ

ಧಾರವಾಡ ಜಿಲ್ಲೆಯಾದ್ಯಂತ ನಿರಂತರ ಮಳೆ ಮತ್ತು ತಂಪು ಗಾಳಿ ಬೀಸುತ್ತಿರುವದರಿಂದ ನಾಳೆ ಜುಲೈ 25 ಮತ್ತು 26 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಇಂದು ಸಂಜೆ ಆದೇಶ ಹೊರಡಿಸಿದ್ದಾರೆ. 

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಬಹುತೇಕ ಕಡೆಗೆ ನಿರಂತರವಾಗಿ ಮಳೆ ಆಗುತ್ತಿದೆ. ಮತ್ತು ತಂಪುಗಾಳಿ ಬಿಸುತ್ತಿದೆ. ಮಕ್ಕಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ಎಲ್ಲ ಅಂಗನವಾಡಿಗಳು, ಪೂರ್ವ ಪ್ರಾಥಮಿಕ ಶಾಲೆ, ಖಾಸಗಿ, ಅನುದಾನಿತ, ಸರಕಾರಿ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ರಜಾ ದಿನಗಳನ್ನು ಮುಂದಿನ ಸಾರ್ವಜನಿಕ ರಜಾ ದಿನಗಳಂದು ಹೆಚ್ಚುವರಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣೆಕೆ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೂಚಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!