Download Our App

Follow us

Home » ಕರ್ನಾಟಕ » ಬಸ್ಸಿನ ಟಿಕೇಟ್ ದರ ಏರಿಕೆ. ಹುಬ್ಬಳ್ಳಿಯಿಂದ ಯಾವ ಯಾವ ಊರಿಗೆ ಎಷ್ಟು ದರ, ಇಲ್ಲಿದೆ ನೋಡಿ.

“ಮುಖ್ಯಮಂತ್ರಿ ಮನೆಯವರು ಎಂದರೆ ಬಿಟ್ಟುಬಿಡಬೇಕಾ? “ರಾಜೀನಾಮೆಯೊಂದೇ ನಿಮಗೆ ಉಳಿದಿರುವ ದಾರಿ”/ ಬಿ ವೈ ವಿಜಯೇಂದ್ರ

‘ಕೆಟ್ಟ ಮೇಲೆ ಬುದ್ಧಿ ಬಂತು’ ಎಂಬ ಗಾದೆ ಮಾತು ಮುಖ್ಯಮಂತ್ರಿಗಳಿಗೆ ಅನ್ವಯಿಸುತ್ತಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ. 

 “ಮುಖ್ಯಮಂತ್ರಿ ಮನೆಯವರು ಎಂದರೆ ಬಿಟ್ಟುಬಿಡಬೇಕಾ?

ಮುಖ್ಯಮಂತ್ರಿ ಮನೆಯವರು ಎಂದರೆ ಬಿಟ್ಟುಬಿಡಬೇಕಾ? 62 ಕೋಟಿ ಕೊಟ್ಟರೆ ನಿವೇಶನಗಳನ್ನು ಹಿಂದಿರುಗಿಸುತ್ತೇನೆ” ಎಂದು ಅಂದು ಆರ್ಭಟಿಸಿದ್ದ ಮಾನ್ಯ ಸಿದ್ದರಾಮಯ್ಯನವರು ಇಂದು ಬೇಷರತ್ತಾಗಿ, ಅವರ ಪತ್ನಿಯವರಿಂದ ನಿವೇಶನ ಹಿಂದಿರುಗಿಸುವ ನಿರ್ಧಾರ ಪ್ರಕಟಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ. 

ಸಿದ್ದರಾಮಯ್ಯನವರು, ಬಿಜೆಪಿ ಆರೋಪಗಳನ್ನು ಸಾರಾಸಗಟಾಗಿ ನಿರಾಕರಿಸಿದರು, ನಿಮಗೆ ದೊರೆತ 14 ಅಕ್ರಮ ನಿವೇಶನಗಳು 5000 ಸಾವಿರಕ್ಕೂ ಹೆಚ್ಚು ನಿವೇಶನಗಳ ಲೂಟಿಕೋರತನಕ್ಕೆ ರಕ್ಷಣೆಯಾಗಿ ನಿಂತಿದೆ ಎಂದು ಆರೋಪಿಸಿ ನಾವು ನಡೆಸಿದ 

‘ಮೈಸೂರು ಚಲೋ’ ಪಾದಯಾತ್ರೆಗೆ ಪರ್ಯಾಯ ಸಮಾವೇಶ ಆಯೋಜಿಸಿ ಭಂಡತನದ ಸಮರ್ಥನೆಗಿಳಿದರು.

ಸಾಮಾಜಿಕ ಕಾರ್ಯಕರ್ತರ ನ್ಯಾಯಾಲಯದ ಹೋರಾಟಕ್ಕೆ ಅಸ್ತು ಎಂದ ಘನತೆವೆತ್ತ ರಾಜ್ಯಪಾಲರನ್ನು ಅವಹೇಳನ ಮಾಡಿದರು, ಅವರು ನೀಡಿದ ಅನುಮತಿಯನ್ನು ಪ್ರಶ್ನಿಸಿ ಉಚ್ಚ ನ್ಯಾಯಾಲಯದಲ್ಲಿ ಹೋರಾಟ ಮಾಡಿದರು. ನ್ಯಾಯಾಲಯದಲ್ಲಿ ಜಯ ದೊರಕದ ಹಿನ್ನಲೆಯಲ್ಲಿ ಕಾನೂನಿನ ಕುಣಿಕೆ ಬಿಗಿತ ಹೆಚ್ಚಾದಂತೆ, CBI-ED ತನಿಖೆಗಳ ನಿರೀಕ್ಷೆಯಿಂದ ಬೆದರಿದ ಮುಖ್ಯಮಂತ್ರಿಗಳು ಏಕಾಏಕಿ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರಕ್ಕೆ ಬಂದಿರುವುದು ಅವರು ಕಾನೂನು ಹೋರಾಟಕ್ಕೆ ಮುನ್ನವೇ ಶಸ್ತ್ರ ತ್ಯಜಿಸಿ ಶರಣಾಗತಿ ಪ್ರಕಟಿಸಿದಂತಾಗಿದೆ ಎಂದು ಹೇಳಿದ್ದಾರೆ. 

ನಿವೇಶನ ಮರಳಿಸಿದ ಮಾತ್ರಕ್ಕೆ ಶಿಕ್ಷೆಯಿಂದ ತಪ್ಪಿಸಿಕೊಳ್ಳಬಹುದು, ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಬಹುದು ಎಂದು ಅಂದುಕೊಂಡಿದ್ದರೆ ಅದು ಅವರ ಅಜ್ಞಾನವನ್ನು ಪ್ರತಿಬಿಂಬಿಸುತ್ತದೆ ಎಂದು ಕಾಲು ಎಳೆದಿದ್ದಾರೆ. 

ನೀವೇಶನಗಳನ್ನು ಹಿಂದಿರುಗಿಸಿ ತಪ್ಪೊಪ್ಪಿಕೊಂಡಂತೆ ಮುಖ್ಯಮಂತ್ರಿ ಸ್ಥಾನಕ್ಕೂ ರಾಜಿನಾಮೆ ನೀಡಿದರೆ ಮರೆತು ಹೋಗಿರುವ ತಮ್ಮ ನೈತಿಕತೆ ಪ್ರಜ್ಞೆ ಪ್ರದರ್ಶಿಸಿದಂತಾಗುತ್ತದೆ ಎಂದು ಬಿ ವೈ ವಿಜಯೇಂದ್ರ ಹೇಳಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಕುಸುಗಲ್ ಗ್ರಾಮದಲ್ಲಿ ಮಗನಿಂದ ತಂದೆ ಮತ್ತು ಮಲತಾಯಿಯ ಭೀಕರ ಕೊಲೆ

ಮಾರಕಾಸ್ತ್ರದಿಂದ  ದಂಪತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ. ಅಶೋಕಪ್ಪ ಕೊಬ್ಬಣ್ಣವರ, ಶಾರದಮ್ಮ ಕೊಬ್ಬಣ್ಣವರ ಮೃತ ದುರ್ದೈವಿಗಳಾಗಿದ್ದು, ಗಂಗಾಧರಪ್ಪ ಹತ್ಯೆಗೈದ ಆರೋಪಿಯಾಗಿದ್ದಾನೆ ಎಂದು

Live Cricket

error: Content is protected !!