ಧಾರವಾಡದ ಆಲೂರು ವೆಂಕಟರಾಯ ಸಾಂಸ್ಕೃತಿಕ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕನಕದಾಸ ಜಯಂತಿಯನ್ನು ಆಚರಿಸಲಾಯಿತು.
ಕನಕದಾಸರ ಭಾವಚಿತ್ರಕ್ಕೆ ಕೇಂದ್ರ ಸಚಿವ ಪ್ರಲ್ಲಾದ ಜೋಶಿ ಮಾಲಾರ್ಪಣೆ ಮಾಡಿ, ಮಾನವಕುಲಕ್ಕೆ ಸಂದೇಶ ನೀಡಿದ ಕನಕದಾಸರು ಇಂದಿಗೂ ಮಾದರಿ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ, ಬಸವರಾಜ ಹೊರಟ್ಟಿ, ರೇವಣ ಸಿದ್ದೇಶ್ವರ ಸ್ವಾಮೀಜಿ, ಕಾಂಗ್ರೇಸ್ ಮುಖಂಡ ಹಾಗೂ ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕ, ಬಸವರಾಜ ಮಲಕಾರಿ, ಜೆಡಿಎಸ್ ಮುಖಂಡ ಹಾಗೂ ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕ, ದೇವರಾಜ ಕಂಬಳಿ, ಹುಡಾ ಅಧ್ಯಕ್ಷ ಶಾಕೀರ ಸನದಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.