ಕನ್ನಡ ಚಲನಚಿತ್ರ ರಂಗದ ಮೇರು ನಟ, ಅಭಿಮಾನಿಗಳ ಪಾಲಿನ ಪರಮಾತ್ಮ ಪುನೀತ ರಾಜಕುಮಾರ ಅವರ ನಿಧನದ ನಂತರ ಕರ್ನಾಟಕ ಸರ್ಕಾರ ಜಾರಿಗೆ ತಂದಿದ್ದ ಹೃದಯ ಜ್ಯೋತಿ 200 ಜನರ ಪ್ರಾಣ ಉಳಿಸಿದೆ.
ಹಠಾತ್ ಹೃದಯಾಘಾತದ ಸಂದರ್ಭದಲ್ಲಿ ಜನರ ಪ್ರಾಣ ರಕ್ಷಣೆಗೆ ಸರ್ಕಾರ, ಡಾ. ಪುನೀತ್ ರಾಜ್‌ಕುಮಾರ್ ಹೃದಯಜ್ಯೋತಿ ಯೋಜನೆ ಜಾರಿಗೊಳಿಸಿದೆ. ಈ ಯೋಜನೆಯಡಿ ಈವರೆಗೆ 200ಕ್ಕೂ ಹೆಚ್ಚು ಜನರ ಜೀವ ಉಳಿಸಲು ಸಾಧ್ಯವಾಗಿದೆ ಎಂದು ಆರೋಗ್ಯ ಸಚಿವ ದಿನೇಶ ಗುಂಡುರಾವ ತಿಳಿಸಿದ್ದಾರೆ.
