ತಮ್ಮ ಮಕ್ಕಳು, ಮಡದಿಯನ್ನು ಲೆಕ್ಕಿಸದೆ ಕೆಲಸದಲ್ಲಿ ತೊಡಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಪೋಲಿಸರು ಮಾನವೀಯತೆ ಮೆರೆದ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡ KC ಪಾರ್ಕ್ ಬಳಿ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಅಲೆದಾಡುತ್ತಿದ್ದಾರೆ ಅನ್ನೋ ಮಾಹಿತಿ ಬಂದಿದ್ದೆ ತಡ, ಪೊಲೀಸರು ತಕ್ಷಣ ಆ ಮಹಿಳೆಯನ್ನು ಆಸ್ಪತ್ರೆಗೆ ಧಾಖಲು ಮಾಡಿದ್ದಾರೆ.
ಮಹಿಳೆಗೆ ಸೂಕ್ತ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಆಂಬುಲೆನ್ಸ್ ಮೂಲಕ ಮಾನಸಿಕ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರ ಸಲಹೆಯಂತೆ ಚಿಕಿತ್ಸೆಯನ್ನು ಕೊಡಿಸುತ್ತಿದ್ದಾರೆ.