ಹುಬ್ಬಳ್ಳಿ ಧಾರವಾಡ ನಡುವೆ ಸಂಚರಿಸುವ ಬಿ ಆರ್ ಟಿ ಎಸ್ ( ಚಿಗರಿ ) ಬಸ್ಸು ಮತ್ತೊಂದು ಅನಾಹುತ ಸೃಷ್ಟಿಸಿದೆ.
ಹುಬ್ಬಳ್ಳಿಯಿಂದ ಧಾರವಾಡದ ಕಡೆಗೆ ವೇಗವಾಗಿ ಬರುತ್ತಿದ್ದ ಬಸ್ಸು ಭಜರಂಗಿ ಕಟ್ಟಡಕ್ಕೆ ಗುದ್ದಿದೆ. ಪರಿಣಾಮ ಬಸ್ಸಿನಲ್ಲಿದ್ದ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ.
ತಮ್ಮದೇ ರಸ್ತೆ ಎಂದು ವೇಗವಾಗಿ ಸಂಚರಿಸುವ ಚಿಗರಿ ಬಸ್ಸುಗಳಿಂದಾಗಿ ಮೇಲಿಂದ ಮೇಲೆ ಅಪಘಾತಗಳು ಸಂಚರಿಸುತ್ತವೆ.
ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದ್ದು, ಉದ್ರಿಕ್ತರು ಬಸ್ಸುಗಳ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.