ರಾಜ್ಯದಲ್ಲಿ ನಕಲಿ ಇನ್ವಾಯ್ಸ್ ಸೃಷ್ಟಿಸಿ ಜಿಎಸ್‌ಟಿ ವಂಚನೆ ಮಾಡದಂತೆ ತಡೆಯಲು ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಮೂಲಕ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯದಲ್ಲಿ ಜಿಎಸ್‌ಟಿ ವಂಚನೆಗಾಗಿಯೇ ನಕಲಿ ದಾಖಲಾತಿ ಸೃಷ್ಟಿಸಿ ಯಾವುದೇ ಸರಕುಗಳನ್ನು ಪೂರೈಸದೆ ನಕಲಿ ಇನ್ವಾಯ್ಸ್ ಸೃಷ್ಟಿಸಿ ಇನ್ ಪುಟ್ ಟ್ಯಾಕ್ಸ್ ಕ್ರೆಡಿಟ್ ಪಡೆಯಲು ಪ್ರಯತ್ನಿಸಿರುವದು ಬೆಳಕಿಗೆ ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅಂತಹ 2,437 ಕಂಪನಿಗಳು ಸಿಕ್ಕಿಬಿದ್ದಿವೆ ಎಂದು ಮುಖ್ಯಮಂತ್ರಿ, ಸಿದ್ದರಾಮಯ್ಯ ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿಯೂ ಜಿಎಸ್‌ಟಿ ವಂಚಕರು ಇದ್ದಾರೆ ಎನ್ನಲಾಗಿದ್ದು, ಕೆಲವರು ಇಂತಹವರಿಗೆ ಸಾಥ ನೀಡುತ್ತಿರುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. ದೊಡ್ಡ ದೊಡ್ಡ ಕುಳಗಳ ಜೊತೆ ಶಾಮೀಲಾಗುವ ಕೆಲವರು, ಸಣ್ಣಪುಟ್ಟ ವ್ಯಾಪಾರಸ್ಥರ ಮೇಲೆ ದಬ್ಬಾಳಿಕೆ ಮಾಡುತ್ತಿರುವದು ಗಮನಕ್ಕೆ ಬಂದಿದೆ.