Download Our App

Follow us

Home » ಕಾನೂನು » ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಮಾಡುವವರ ಮಾಹಿತಿ ನೀಡಿ, ಒಂದು ಲಕ್ಷ ಬಹುಮಾನ ಗೆಲ್ಲಿ. ಸರ್ಕಾರದ ಓಪನ್ ಆಫರ್.

ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಮಾಡುವವರ ಮಾಹಿತಿ ನೀಡಿ, ಒಂದು ಲಕ್ಷ ಬಹುಮಾನ ಗೆಲ್ಲಿ. ಸರ್ಕಾರದ ಓಪನ್ ಆಫರ್.

ರಾಜ್ಯದಲ್ಲಿ 2023-24 ರಿಂದ ಇಲ್ಲಿಯವರೆಗೆ ಭ್ರೂಣಹತ್ಯೆ ಸಂಬಂಧಿಸಿದಂತೆ 8 ಪ್ರಕರಣ ದಾಖಲಿಸಿ 46 ಜನರನ್ನು ಬಂಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡುರಾವ ತಿಳಿಸಿದ್ದಾರೆ. 

ರಾಜ್ಯದಲ್ಲಿ ಸ್ಕ್ಯಾನಿಂಗ್ ಸೆಂಟರ್ ಮತ್ತು ಆಸ್ಪತ್ರೆಗಳ ಮೇಲೆ ನಿಗಾ ಇಡಲಾಗಿದೆ ಎಂದ ಅವರು, 2018 ರಿಂದ ರಾಜ್ಯದಲ್ಲಿ ‘ಬಾಲಿಕಾ’ ಆನ್ಲೈನ್ ಸಾಫ್ಟ್ ವೇರ್ ಮುಖಾಂತರ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ ಗಳನ್ನು ಕಡ್ಡಾಯವಾಗಿ ನೋಂದಣಿ ಮತ್ತು ನವೀಕರಣ ಮಾಡಲಾಗುತ್ತಿದೆ ಎಂದರು.

ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಮಾಡುವಂತಹ ಸ್ಕ್ಯಾನಿಂಗ್ ಸೆಂಟರ್,  ವೈದ್ಯರು,   ದಲ್ಲಾಳಿಗಳು, ಗರ್ಭಿಣಿಯರ ಸಂಬಂಧಿಕರ ವಿರುದ್ಧ ಮಾಹಿತಿ ನೀಡಿ, ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಸಹಕರಿಸುವ ಮಾಹಿತಿದಾರರಿಗೆ ಕರ್ನಾಟಕ ಸರ್ಕಾರದಿಂದ ನೀಡುತ್ತಿದ್ದ ಬಹುಮಾನವನ್ನು ₹50 ಸಾವಿರದಿಂದ ₹1ಲಕ್ಷ ದವರೆಗೆ ಹೆಚ್ಚಿಸಲಾಗಿದೆ.

ಹೆಣ್ಣು ಭ್ರೂಣ ಹತ್ಯೆ ಮಾಡದಂತೆ ರಾಜ್ಯಾದ್ಯಂತ ಜನ ಜಾಗೃತಿ ಹಾಗೂ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ದಿನೇಶ್ ಗುಂಡುರಾವ ತಿಳಿಸಿದ್ದಾರೆ. 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!