ಧಾರವಾಡದ ವಿದ್ಯಾಗಿರಿ ಠಾಣೆ ವ್ಯಾಪ್ತಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ತೂಫಾನ್ ಹೆಸರಿನ ಸಣ್ಣ ಗೂಡ್ಸ್ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ.
ಕಿರಿದಾದ ರಸ್ತೆಯಲ್ಲಿ ತೂಫಾನ್ ನಂತೆ ವೇಗವಾಗಿ ಬಂದ ಗೂಡ್ಸ್ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮತ್ತೊಬ್ಬ ಚಿಂತಾಜನಕ ಸ್ಥಿತಿಯಲ್ಲಿದ್ದಾನೆ.
ಧಾರವಾಡ ಟೋಲ್ ನಾಕಾದಿಂದ ಕಲಘಟಗಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ರಸ್ತೆ ನಿರ್ಮಾಣ ಕಾಮಗಾರಿ ಆಮೆಗತಿಯಲ್ಲಿ ಸಾಗಿದ್ದು, ಈ ರಸ್ತೆಯಲ್ಲಿ ಬಹಳಷ್ಟು ಸಣ್ಣಪುಟ್ಟ ಅಪಘಾತಗಳು ಸಂಭವಿಸುತ್ತಿವೆ.