ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ ಅವರನ್ನು ಅಪಮಾನಿಸುವ ರೀತಿಯಲ್ಲಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಧಾರವಾಡದಲ್ಲಿ ಕಾಂಗ್ರೇಸ್ ಪ್ರತಿಭಟನೆ ನಡೆಸಿತು.
ಧಾರವಾಡದ ವಿವೇಕಾನಂದ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೇಸ್ ಕಾರ್ಯಕರ್ತರು ಅಮಿತ್ ಶಾ ಅವರ ರಾಜೀನಾಮೆಗೆ ಆಗ್ರಹಿಸಿದ್ರು.
ಪ್ರತಿಭಟನೆಯಲ್ಲಿ ಮಹಾನಗರ ಕಾಂಗ್ರೇಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರ, ದೀಪಕ ಚಿಂಚೋರೆ, ರಾಬರ್ಟ್ ದದ್ದಾಪುರಿ, ಸಲೀಮ್ ಸೊನ್ನೆಖಾನ್, ಆನಂದ ಜಾದವ, ನಾಗರಾಜ ಗುರಿಕಾರ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.