ಲಕ್ಷ್ಮಿ ಹೆಬ್ಬಾಳಕರರನ್ನು ಅಪಮಾನಿಸಿದ ಆರೋಪದ ಮೇಲೆ ಬಂಧಿತರಾಗಿದ್ದ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿಯವರನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ನೀಡಿದೆ.
ಬಿಜೆಪಿ ಎಂಎಲ್‌ಸಿ ಸಿ ಟಿ ರವಿ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಮಧ್ಯಂತರ ಆದೇಶ ಮಾಡಿದ ಹೈಕೋರ್ಟ್, ತನಿಖಾಧಿಕಾರಿ ಸೂಚಿಸಿದಾಗ ರವಿ ತನಿಖೆಗೆ ಹಾಜರಾಗಬೇಕು ಎಂಬ ಷರತ್ತು ವಿಧಿಸಿದೆ.