ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ ಕುರಿತು ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಗದಗನಲ್ಲಿ ಪ್ರತಿಭಟನೆ ಆರಂಭಗೊಂಡಿದೆ.
ದಲಿತ ಪರ ಸಂಘಟನೆಗಳು ಇಂದು ಗದಗ ಬಂದ ಗೆ ಕರೆ ಕೊಟ್ಟಿದ್ದಾರೆ. ಬೆಳಿಗ್ಗೆಯಿಂದಲೇ ಬಂದ್ ಆರಂಭಗೊಂಡಿದ್ದು, ಅಂಗಡಿ ಮುಗ್ಗಟ್ಟುಗಳು ಬಾಗಿಲು ಹಾಕಿಕೊಂಡಿವೆ. ಪ್ರತಿಭಟನಾಕಾರರು ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ, ಘೋಷಣೆ ಕೂಗುತ್ತಿದ್ದಾರೆ.
ರಸ್ತೆ ಸಂಪರ್ಕ ಬಂದ್ ಮಾಡಲಾಗಿದ್ದು, ಬಸ್ ನಿಲ್ದಾಣ ಸಂಪೂರ್ಣ ಬಿಕೋ ಎನ್ನುತ್ತಿದೆ. ಅಹಿತಕರ ಘಟನೆ ನಡೆಯದಂತೆ ಎಲ್ಲೆಡೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
