ಬೆಂಗಳೂರಿನಲ್ಲಿ 8 ತಿಂಗಳ ಮಗು ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ (ಎಚ್‌ಎಂಪಿವಿ) ಸೋಂಕಿಗೆ ಒಳಗಾಗಿರುವ ವರದಿಗಳಿವೆ.
ಆದರೆ, ಇದು ಹೊಸ ವೈರಸ್ ಅಲ್ಲ. ಮಗುವಿನ ಆರೋಗ್ಯ ಸ್ಥಿರವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ ಗುಂಡುರಾವ ತಿಳಿಸಿದ್ದಾರೆ.
2001ರಿಂದ ಎಚ್‌ಎಂಪಿವಿ ವೈರಾಣು ಕಾಣಿಸಿಕೊಳ್ಳುತ್ತಿದೆ. ಈ ಕುರಿತು ಗಾಬರಿಯಾಗುವ ಅವಶ್ಯಕತೆಯಿಲ್ಲ. ಆದರೂ, ಮುನ್ನೆಚ್ಚರಿಕೆಯಾಗಿ ಈಗಾಗಲೇ ಮಾರ್ಗಸೂಚಿ ಹೊರಡಿಸಿದ್ದೇವೆ ಎಂದು ಹೇಳಿದ್ದಾರೆ.
ಸಾರ್ವಜನಿಕರು ಆತಂಕ ಬಿಟ್ಟು ಜಾಗೃತಿ ವಹಿಸಬೇಕು ಎಂದು ಮನವಿ ಮಾಡಿರುವ ಆರೋಗ್ಯ ಸಚಿವರು, ಸೋಂಕು ಹರಡದಂತೆ ತಡೆಯಲು ವೈದ್ಯಕೀಯ ಸಿಬ್ಬಂದಿಗೆ ತೆಗೆದುಕೊಳ್ಳಬಹುದಾದ ಕ್ರಮದ ಬಗ್ಗೆ ಸೂಚನೆ ನೀಡಿದ್ದಾರೆ.