ನಾಳೆ ಕೆಲ ಸಂಘಟನೆಗಳು, ಹುಬ್ಬಳ್ಳಿ ಧಾರವಾಡ ಬಂದ್ ಗೆ ಕರೆ ಕೊಟ್ಟ ಹಿನ್ನೆಲೆಯಲ್ಲಿ ಮುನ್ನೇಚ್ಚರಿಕೆ ಕ್ರಮವಾಗಿ ಹುಬ್ಬಳ್ಳಿ ಧಾರವಾಡದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಡಾ. ಅಂಬೇಡ್ಕರ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಖಂಡಿಸಿ ನಾಳೆ ವಿವಿಧ ಸಂಘಟನೆಗಳು ಹುಬ್ಬಳ್ಳಿ ಧಾರವಾಡ ಬಂದ್ ನಡೆಸಲಿವೆ.
ಬೆಳಿಗ್ಗೆ 6 ಘಂಟೆಯಿಂದ ಸಂಜೆ 6 ರವರೆಗೆ ಬಂದ್ ನಡೆಸುವದಾಗಿ ಸಂಘಟನೆಗಳ ಮುಖಂಡರು ಹೇಳಿದ್ದಾರೆ. ರಸ್ತೆ ಸಂಪರ್ಕ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ನಾಳೆ ಹುಬ್ಬಳ್ಳಿ ಧಾರವಾಡದಲ್ಲಿನ ಶಾಲಾ ಕಾಲೇಜುಗಳಿಗೆ ಧಾರವಾಡ ಜಿಲ್ಲೆಯ DDPI ರಜೆ ಘೋಷಣೆ ಮಾಡಿದ್ದಾರೆ.