ಕರ್ನಾಟಕದ ಇತಿಹಾಸದಲ್ಲಿಯೇ ಮೊದಲು ಎನ್ನುವಂತೆ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಮ್ಮುಖದಲ್ಲೇ ಮೋಸ್ಟ್ ವಾಂಟೆಂಡ್ 6 ನಕ್ಸಲರು ಶರಣಾಗತಿಯಾಗಿದ್ದಾರೆ.
ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಸಿದ್ಧರಾಮಯ್ಯನವರ ಮುಂದೆ ನಕ್ಸಲರು ಶರಣಾದರು. ಈ ಮೂಲಕ ಶಸ್ತ್ರಾಸ್ತ್ರ ಹೋರಾಟಕ್ಕೆ ಗುಡ್ಬೈ ಹೇಳಿ ಪ್ರಜಾಸತ್ತಾತ್ಮಕ ಹೋರಾಟಕ್ಕೆ ಜೈ ಎಂದಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂದು ಸುವರ್ಣಾಕ್ಷರದಲ್ಲಿ ಬರೆದಿಡುವ ದಿನ. ಯಾಕಂದ್ರೆ, ಕಳೆದ ಹಲವು ವರ್ಷಗಳಿಂದ ಕಾಡಿನೊಳಗೆ ಅಡಗಿ ಕುಳಿತು ಸದಾ ಸಂಘರ್ಷ, ರಕ್ತಚರಿತ್ರೆ ಬರೆಯುತ್ತಿದ್ದ ನಕ್ಸಲರು ಇದೀಗ ಮುಖ್ಯವಾಹಿನಿಗೆ ಬಂದಿದ್ದಾರೆ.
ಆರು ನಕ್ಸಲರು ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಗೃಹ ಸಚಿವ ಡಾ ಜಿ ಪರಮೇಶ್ವರ್ ಸಮ್ಮುಖದಲ್ಲಿ ಶರಣಾಗಿದ್ದಾರೆ.
ಇನ್ನು ಶರಣಾದ ನಕ್ಸಲರಿಗೆ ಸಿಎಂ, ಸಂವಿಧಾನದ ಪುಸ್ತಕ ನೀಡಿದರು. ಈ ಮೂಲಕ ಕರ್ನಾಟಕ ನಕ್ಸಲ ಮುಕ್ತ ರಾಜ್ಯವಾದಂತಾಗಿದೆ.
ಆರು ನಕ್ಸಲರಾದ ಶೃಂಗೇರಿ ತಾಲೂಕಿನ ಮುಂಡುಗಾರು ಗ್ರಾಮದ ಲತಾ, ಕಳಸ ತಾಲೂಕಿನ ಬಾಳೆಹೊಳೆ ಗ್ರಾಮದ ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆ ಕುಂತಲೂರು ಮೂಲಕದ ಸುಂದರಿ, ರಾಯಚೂರು ಮೂಲದ ಮಾರಪ್ಪ ಅರೋಳಿ, ವಸಂತ, ಎನ್.ಜೀಶಾ ಹಲವು ವರ್ಷಗಳ ಸಶಸ್ತ್ರ ಹೋರಾಟಕ್ಕೆ ಗುಡ್ಬೈ ಹೇಳಿ ಮುಖ್ಯವಾಹಿನಿಗೆ ಬಂದಿದ್ದಾರೆ.