ಆಂಧ್ರಪ್ರದೇಶದ ತಿರುಪತಿ ದೇವಸ್ಥಾನದಲ್ಲಿ ಉಂಟಾದ ಕಾಲ್ತುಳಿತದಲ್ಲಿ ನಾಲ್ವರು ಭಕ್ತರು ಸಾವನ್ನಪ್ಪಿದ ಘಟನೆ ನಡೆದಿದೆ.
ವೈಕುಂಠ ದ್ವಾರ ದರ್ಶನ ಟಿಕೆಟ್ ಕೇಂದ್ರದ ಬಳಿ ಟೋಕನ್ ವಿತರಣೆ ವೇಳೆ ಕಾಲ್ತುಳಿತ ಉಂಟಾಗಿದೆ ಎನ್ನಲಾಗಿದೆ.
ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದರೆ, 150 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.