ಸಿ ಎಲ್ ಪಿ ಸಭೆ ಮುಗಿಸಿಕೊಂಡು ಬೆಳಗಿನ ಜಾವ ಬೆಂಗಳೂರಿನಿಂದ ಬೆಳಗಾವಿ ಹೊರಟಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿದ್ದ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.
ಕಿತ್ತೂರ ಬಳಿ ಇರುವ ಅಂಬಡಗಟ್ಟಿ ಕ್ರಾಸ್ ಬಳಿ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಲಕ್ಷ್ಮಿ ಹೆಬ್ಬಾಳಕರ ಅವರ ಬೆನ್ನಿಗೆ ಗಾಯಗಳಾಗಿವೆ. ಅಲ್ಲದೇ ಸಹೋದರ ಚೆನ್ನರಾಜ ಹೊಟ್ಟಿಹೊಳಿಯವರಿಗೂ ಗಾಯಗಳಾಗಿವೆ.
ಇಬ್ಬರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಧಾಖಲು ಮಾಡಲಾಗಿದೆ.