ಹುಬ್ಬಳ್ಳಿ ಧಾರವಾಡ ಮಹಾನಗರ ಕಾಂಗ್ರೇಸ್ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಜೋರಾಗಿದೆ.
ಹಾಲಿ ಅಧ್ಯಕ್ಷ ಅಲ್ತಾಫ ಹಳ್ಳೂರರನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ಚರ್ಚೆಗಳು ಕೇಳಿ ಬಂದಿದ್ದು, ಅಧ್ಯಕ್ಷ ಸ್ಥಾನಕ್ಕೆ 10 ಕ್ಕೂ ಹೆಚ್ಚು ಜನ ಅಕಾಂಕ್ಷಿಗಳಿದ್ದಾರೆ ಎನ್ನಲಾಗಿದೆ.
ಈ ಬಾರಿ ಅಲ್ಪಸಂಖ್ಯಾತ ಮುಸ್ಲಿಂ ರ ಬದಲು ಲಿಂಗಾಯತ ಪಂಚಮಸಾಲಿಗಳಿಗೆ ಅಧ್ಯಕ್ಷರನ್ನಾಗಿ ಮಾಡಲು ಲಾಭಿ ನಡೆದಿದೆ ಎನ್ನಲಾಗಿದೆ.
ಅಧ್ಯಕ್ಷ ಸ್ಥಾನಕ್ಕೆ ಅನ್ವರ್ ಮುಧೋಳ, ಶಾಜಹಾನ್, ರಾಜಶೇಖರ ಮೆಣಸಿನಕಾಯಿ ಸೇರಿದಂತೆ ಹಲವರ ಹೆಸರು ಕೇಳಿ ಬರುತ್ತಿವೆ.