ಗಾಂಧಿ ಭಾರತ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಳಗಾವಿಯಲ್ಲಿ ವಾಸ್ತವ್ಯ ಹೂಡಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಬೆಳಗಾವಿಯ ಕಪಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ದಕ್ಷಿಣ ಕಾಶಿ ಖ್ಯಾತಿಯ ಬೆಳಗಾವಿಯ ಕಪಿಲೇಶ್ವರ ದೇಗುಲಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ ಡಿ ಕೆ ಶಿವಕುಮಾರ ಅವರನ್ನು ದೇವಸ್ಥಾನ ಮಂಡಳಿ ಸದಸ್ಯರು ಸನ್ಮಾನಿಸಿದರು.
ಜನೆವರಿ 21 ರಂದು ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದ ಸಿದ್ಧತೆಗಾಗಿ ಡಿ ಕೆ ಶಿವಕುಮಾರ ಅವರು ಬೆಳಗಾವಿಯಲ್ಲಿದ್ದಾರೆ.