ರೈಲ್ವೇ ಇಲಾಖೆಗೆ ಸಂಬಂದಿಸಿದಂತೆ ಬೆಳಗಾವಿ ಸಂಸದ ಜಗದೀಶ ಶೆಟ್ಟರ ಅವರು ಹುಬ್ಬಳ್ಳಿಯಲ್ಲಿ ಸಭೆ ನಡೆಸಿದರು.
ಬೆಳಗಾವಿಗೆ ಸಂಬಂಧಿಸಿದಂತೆ ರೈಲು ಸೇವೆ ಒದಗಿಸುವ ಬಗ್ಗೆ ಸುದೀರ್ಘವಾದ ಚರ್ಚೆ ನಡೆಸಲಾಯಿತು.
ಬೆಂಗಳೂರು – ಧಾರವಾಡ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರವನ್ನು ಬೆಳಗಾವಿವರೆಗೆ ವಿಸ್ತರಿಸುವುದು ಬಹಳ ಅವಶ್ಯವಿದ್ದು ಇದು ಬೆಳಗಾವಿ ಜಿಲ್ಲೆಯ ಸಾರ್ವಜನಿಕರ ಬೇಡಿಕೆಯೂ ಸಹ ಆಗಿದೆ ಎಂದರು.
ಬೆಳಗಾವಿ ಮಿರಜ್ ನಡುವೆ ಸಂಚರಿಸುವ ರೈಲನ್ನು ಮೆಮೊ ರೈಲನ್ನಾಗಿ ಮಾಡುವಂತೆ ಮನವಿ ಮಾಡಿದರು.
ಲೋಕಾಪುರ – ರಾಮದುರ್ಗ – ಸವದತ್ತಿ – ಧಾರವಾಡ ನೂತನ ರೈಲು ಮಾರ್ಗ ನಿರ್ಮಾಣಕ್ಕೆ ಬೇಡಿಕೆ ಇಟ್ಟ ಜಗದೀಶ ಶೆಟ್ಟರ ಅವರು, ಈ ಮಾರ್ಗದ ಕುರಿತು ಮುಂಚಿತ ಸಮೀಕ್ಷೆ ನಡೆಸುವುದು ಸೂಕ್ತ ಈ ನಿಟ್ಟಿನಲ್ಲಿ ಕೂಡಲೇ ಮುಂದಿನ ಅಗತ್ಯ ಕ್ರಮವನ್ನು ಜರುಗಿಸಲು ಸೂಚಿಸಿದರು.
ಕೇಂದ್ರ ಸಚಿವ ಪ್ರಲ್ಲಾದ ಜೋಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನೈರುತ್ಯ ವಲಯದ ರೈಲ್ವೆ ಮಹಾಪ್ರಬಂಧಕ ಅರವಿಂದ ಶ್ರೀನಿವಾಸ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.