ವಿಧಾನಸಭಾ ಚುನಾವಣೆಗೆ ಇನ್ನು ಮೂರು ವರ್ಷ ಬಾಕಿ ಇರುತ್ತಿದ್ದಂತೆ, ನವಲಗುಂದ ಕ್ಷೇತ್ರದ ಮುಂದಿನ ಶಾಸಕರು ಎಂಬ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣದಲ್ಲಿ ಹವಾ ಸೃಷ್ಟಿಸಿದೆ.
ಇಷ್ಟು ದಿನ ಜೆಡಿಎಸ್ ನಲ್ಲಿದ್ದು ಈಗಷ್ಟೆ ಬಿಜೆಪಿ ಸೇರಿರುವ ಮಂಜು ಬಾಳಿ ಎಂಬುವವರು ಸಾಮಾಜಿಕ ಜಾಲತಾಣದಲ್ಲಿ ಶಂಕರ ಪಾಟೀಲ ಮುನೇನಕೊಪ್ಪರ ಪೋಸ್ಟರ್ ಒಂದನ್ನು ಹರಿಬಿಟ್ಟಿದ್ದು, ಅದು ವೈರಲ್ ಆಗಿದೆ.
ಶಂಕರ ಪಾಟೀಲ ಮುನೇನಕೊಪ್ಪ ಅವರು ನವಲಗುಂದ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದು, ಕಾರ್ಯಕರ್ತರನ್ನು ಭೇಟಿ ಮಾಡಿ, ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಈ ಮಧ್ಯೆ ಮಂಜು ಬಾಳಿಯವರ ಪೋಸ್ಟರ್ ಗಮನ ಸೆಳೆಯುತ್ತಿದೆ.