ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ್ದ ಎರಡು ಪ್ರಕರಣಗಳಿಗೆ ಸಂಬಂದಿಸಿದಂತೆ ಇಂದು ಧಾರವಾಡ ಹೈಕೋರ್ಟ್ ನಿಂದ ಮಹತ್ವದ ತೀರ್ಪು ಹೊರಬೀಳಲಿದೆ.
ಪೋಕ್ಸೊ ಪ್ರಕರಣ ಮತ್ತು ಆನಂತರದ ನ್ಯಾಯಾಂಗ ಪ್ರಕ್ರಿಯೆ ರದ್ದತಿ ಕೋರಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು, ಹಾಗೂ ವೈ ಎಂ ಅರುಣ, ರುದ್ರೇಶ ಮರಳಸಿದ್ದಯ್ಯ, ಜಿ ಮರಿಸ್ವಾಮಿ ಅವರು ಸಲ್ಲಿಸಿರುವ ಅರ್ಜಿಗಳಿಗೆ ಸಂಬಂಧಿಸಿದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಇಂದು ಪ್ರಕಟಿಸಲಿದೆ.
ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ, ಜನವರಿ 17ರಂದು ಕಾಯ್ದಿರಿಸಿರುವ ಆದೇಶವನ್ನು ಇಂದು ಪ್ರಕಟಿಸಲಿದೆ.
ಮತ್ತೊಂದೆಡೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಂಬಂಧಿಸಿದ ಮುಡಾ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಗೆ ವಹಿಸಬೇಕು ಎಂದು ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದ ಆದೇಶ ಸಹ ಇಂದು ಪ್ರಕಟವಾಗಲಿದೆ.
ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು, ಜನೇವರಿ 27ರಂದು ಕಾಯ್ದಿರಿಸಿರುವ ಆದೇಶವನ್ನು ಇಂದು ಪ್ರಕಟಿಸಲಿದೆ.
ಇಂದು ಎಲ್ಲರ ಚಿತ್ತ ಧಾರವಾಡ ಹೈಕೋರ್ಟ್ ನತ್ತ ನೆಟ್ಟಿದೆ.