ರಾಜ್ಯ ರಾಜಕಾರಣದಲ್ಲಿ ದೊಡ್ಡ ಸುದ್ದಿ ಮಾಡಿದ್ದ ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯನವರ ಪ್ರಕರಣಗಳಿಗೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್ ಆದೇಶ ಪ್ರಕಟಿಸಿದೆ.
ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಹೈಕೋಟ್೯ ಬಿಗ್ ರಿಲೀಫ್ ನೀಡಿದೆ.
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆ’ ಅಡಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ಭಾಗಶ: ಪುರಸ್ಕರಿಸಿದ್ದು, ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆದರೆ ಪ್ರಕರಣ ರದ್ದು ಕೋರಿಕೆಯನ್ನು ತಳ್ಳಿ ಹಾಕಿದೆ. ಯಡಿಯೂರಪ್ಪನವರು ಈಗ ಬಂಧನದ ಭೀತಿಯಿಂದ ಪಾರಾಗಿದ್ದಾರೆ.
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಂಬಂಧಿಸಿದಂತೆ ಮೂಡಾ ಪ್ರಕರಣವನ್ನು ಸಿ ಬಿ ಐ ಗೆ ವಹಿಸುವಂತೆ ಸ್ನೇಹಮಯಿ ಕೃಷ್ಣಾ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಲಾಗಿದ್ದು, ಸಿದ್ದರಾಮಯ್ಯನವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.