ಧಾರವಾಡದ ರಜತಗಿರಿ ಬಡಾವಣೆಯಲ್ಲಿ ಗ್ಯಾಸ್ ಪೈಪ್ ನಲ್ಲಿ ಸೋರಿಕೆ ಹಿನ್ನೆಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಮನೆಗಳಿಗೆ ನೇರವಾಗಿ ಗ್ಯಾಸ್ ಸಂಪರ್ಕ ಕಲ್ಪಿಸುವ ಪೈಪ್ ಲೈನ್ ನಲ್ಲಿ ಗ್ಯಾಸ್ ಸೋರಿಕೆಯಿಂದ ಈ ಅವಘಡ ಸಂಭವಿಸಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.
ಏಕಕಾಲಕ್ಕೆ ಎರಡು ಕಡೆಗೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಧಾರವಾಡದ ವಿದ್ಯಾಗಿರಿ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಗ್ಯಾಸ್ ಪೈಪ್ ಸಂಪರ್ಕದಲ್ಲಿ ದೋಷ ಕಾಣಿಸಿಕೊಂಡಿದೆ.
![Karnataka Files](https://secure.gravatar.com/avatar/3c8a792dfb280b36a94603273157ff83?s=96&r=g&d=https://karnatakafiles.com/wp-content/plugins/userswp/assets/images/no_profile.png)