ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಕ್ಷೇತ್ರದಿಂದ ಹೊರಗಿದ್ದರು, ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಶಿವಶಂಕರ ಹಂಪಣ್ಣವರ ಹೇಳಿದ್ದಾರೆ.
ಧಾರವಾಡ ಗ್ರಾಮೀಣ ಕ್ಷೇತ್ರ ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿದ್ದು, ಶಿವಲೀಲಾ ಕುಲಕರ್ಣಿಯವರ ಎಳಿಗೆ ಸಹಿಸದೆ ಬಿಜೆಪಿಯವರು ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ.
ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವ ಸಂದರ್ಭದಲ್ಲಿ ಹಿರಿಯರನ್ನು ಕರೆಸಿ ಅವರಿಂದ ಪೂಜೆ ಮಾಡಿಸುವದು ಮೊದಲಿನಿಂದಲೂ ಬಂದ ಪದ್ಧತಿಯಾಗಿದೆ ಎಂದು ಶಿವಶಂಕರ ಹಂಪಣ್ಣವರ ತಿಳಿಸಿದ್ದಾರೆ.
