ಇತ್ತೀಚೆಗೆ ಹೊರರಾಜ್ಯಗಳಿಂದ ವಲಸೆ ಬರುವ ಕಾರ್ಮಿಕರಿಂದ ಅಪರಾಧಗಳ ಸಂಖ್ಯೆ ಹೆಚ್ಚುತ್ತಿರುವ ಸಂಗತಿಯನ್ನು ಕಾರ್ಮಿಕ ಇಲಾಖೆ ಗಂಭೀರವಾಗಿ ಪರಿಗಣಿಸಿದೆ.
ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ನಡೆದ ಘಟನೆ ಹಿನ್ನೆಲೆಯಲ್ಲಿ ಲಾಡ್ ಈ ನಿರ್ಧಾರಕ್ಕೆ ಬಂದಿದ್ದಾರೆ.
ಸಂಘಟಿತ ವಲಯದಲ್ಲಿ ಹೊರರಾಜ್ಯಗಳಿಂದ ಬರುವ ವಲಸೆ ಕಾರ್ಮಿಕರ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಿ, ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದ್ದಾರೆ.
ಅದರಂತೆ ಅಸಂಘಟಿತ ವಲಯದಲ್ಲಿ ದುಡಿಯಲು ಹೊರರಾಜ್ಯಗಳಿಂದ ವಲಸೆ ಬರುವವರ ಬಗ್ಗೆಯೂ ಮಾಹಿತಿ ಸಂಗ್ರಹಣೆ ಮಾಡಿ, ನಿಗಾ ವಹಿಸಲು ಕ್ರಮವಹಿಸುವ ಬಗ್ಗೆ ಚಿಂತನೆ ನಡೆದಿದೆ.
ಈ ನಿಟ್ಟಿನಲ್ಲಿ ಸರ್ಕಾರದ ವಿವಿಧ ಇಲಾಖೆಗಳೊಂದಿಗೆ ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಸೂಕ್ತ ಕಾನೂನು ರಚಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಸಚಿವ ಸಂತೋಷ ಲಾಡ್ ಹೇಳಿದ್ದಾರೆ.
